ವಚನ - 962     
 
ಉಳ್ಳವರು ಹಗೆಹ ತೆಗೆವನ್ನಕ್ಕರ, ಇಲ್ಲದವರ ಹರಣ ಹೋಯಿತ್ತೆಂಬ ಗಾದೆ ಎನಗಾಯಿತ್ತು. ಮಾತು ಬಣ್ಣಿಸಲು ಹೊತ್ತು ಹೋಯಿತ್ತಯ್ಯಾ. ನಿನಗೆ ಅದೆ, ಹರಿನುಡಿಗೆ ಕಡೆಯಿಲ್ಲ. ಒಬ್ಬರ ನೋಡುವಾಗ, ಅರುವತ್ತು ಮನುಷ್ಯರ ನೋಡುವ ಹಾಂಗೆ ಆಗುತ್ತಿದೆ. ಶೂನ್ಯಸಿಂಹಾಸನ ಬವರಿಗೊಡುತ್ತಿದೆ. ಪ್ರಾಣ ಹೆಡೆತಲೆಯಲ್ಲಿ ಹೋಗುತ್ತಿದೆ. ಗುಹೇಶ್ವರ ಹಸಿದನು, ಪದಾರ್ಥವ ನೀಡಯ್ಯಾ ಸಂಗನಬಸವಣ್ಣಾ.