Index   ವಚನ - 968    Search  
 
ಎತ್ತೆತ್ತ ನೋಡಿದಡೆ ಬಸವಣ್ಣನೆಂಬ ಬಳ್ಳಿ, ಆ ಬಳ್ಳಿಯ ಹಿಡಿದೆತ್ತಿದಡೆ ಲಿಂಗವೆಂಬ ಗೊಂಚಲು. ಆ ಲಿಂಗದ ಗೊಂಚಲ ಹಿಡಿದೆತ್ತಿದಡೆ, ಭಕ್ತಿರಸಮಯವಾಯಿತ್ತಯ್ಯಾ. ಇದಾರಯ್ಯಾ ಅಮಳೋಕ್ಯವ ಮಾಡಬಲ್ಲವರು? ಇದಾರಯ್ಯಾ ಹೊರಗೆ ಪ್ರಜ್ವಲಿಸಿ ತೋರಬಲ್ಲವರು? ಬಸವಗುರು[ವೆ] ಎನ್ನ ಕರಸ್ಥಲದ ಲಿಂಗದ ಆದಿಯನರುಹಿ ತೋರಿದ ಕಾರಣ, ಗುಹೇಶ್ವರಲಿಂಗದ ನಿಲವ ನಿನ್ನಿಂದಲರಿದೆ, ಈ ಉಳಿದ ಲೋಕಾದಿಲೋಕಂಗಳೆಲ್ಲವು ಎನ್ನ ಮುಖದಲ್ಲಿ ಕಿಂಚಿತ್ತ.