Index   ವಚನ - 975    Search  
 
ಎನ್ನ ಮನದ ಮರವೆ ಭಿನ್ನವಾಗದು. ಮರೆದು ಅರಿದೆನೆಂದಡೆ ಅರುಹಿನ ಮರವೆಯ ಮಧ್ಯದಲ್ಲಿ ಎಡೆದೆರಪಿಲ್ಲ. ಕೋಲಿನಲ್ಲಿ ನೀರ ಹೊಯ್ದರೆ ಸೀಳಿ ಹೋಳಾದುದುಂಟೆ? ಅರಿವುದೊಂದು ಘಟ, ಮರೆವುದೊಂದು ಘಟ, ಒಡಗೂಡುವ ಠಾವಿನ್ನೆಂತೋ. ಹುತ್ತದ ಬಾಯಿ ಹಲವಾದಡೆ ಸರ್ಪನೈದುವಲ್ಲಿ ಒಡಲೊಂದೆ ತಪ್ಪದು. ತನ್ನ ಚಿತ್ತದ ಭೇದವಲ್ಲದೆ ವಸ್ತುವಿಂಗೆ ಭೇದವುಂಟೆ [ಗುಹೇಶ್ವರ].