ವಚನ - 988     
 
ಎಲ್ಲರಂತೆ ನುಡಿದು ಎಲ್ಲರಂತೆ ನಡೆದು, ಎಲ್ಲರಂತೆ ಸಂಸಾರವ ಬಳಸುತ್ತಿಪ್ಪರೆಂದು ಎಲ್ಲರಂತೆ ಕಾಣಬಹುದೆ ನಿಜ ದೊರೆಕೊಂಡ ನಿರ್ಮಲಜ್ಞಾನಿಗಳ? ಅವರ ಮನೋಮಧ್ಯದಲ್ಲಿ ತೊಳಗಿ ಬೆಳಗುವ ಶಿವಜ್ಞಾನಬೀಜವು ಹೊಳ್ಳಪ್ಪುದೆ? ಉರಿಯದಿದ್ದಡೂ ಕಿಚ್ಚನೊರಲೆ ಕೊಂಬುದೆ ಗುಹೇಶ್ವರಾ?