Index   ವಚನ - 995    Search  
 
ಏನೂ ಏನೂ ಇಲ್ಲದ ಬಯಲೊಳಗೊಂದು ಬಗೆಗೊಳಗಾದ ಬಣ್ಣ ತಲೆದೋರಿತ್ತು. ಆ ಬಣ್ಣವು ಆ ಬಯಲ ಶೃಂಗರಿಸಲು, ಬಯಲು ಸ್ವರೂಪಗೊಂಡಿತ್ತು. ಅಂತಪ್ಪ ಸ್ವರೂಪಿನ ಬೆಡಗು ತಾನೆ, ನಮ್ಮ ಗುಹೇಶ್ವರಲಿಂಗದ ಪ್ರಥಮಭಿತ್ತಿ.