Index   ವಚನ - 998    Search  
 
ಐದಾನೆಯ ಬೆನ್ನಲ್ಲಿ ಐದು ಒಂಟೆ ಹೋದವು, ಒಂಬತ್ತು ಸಾವಿರ ಕುದುರೆಯನು ಒಂದು ಎಳಗ ಎಯ್ದಿಸುತ್ತಿದ್ದಿತ್ತು. ಅರೆಮರುಳಾದವನ ನೆರೆ ಮರುಳಾದವ ಬಲ್ಲನೆ? ಕುರುಬ ಕುರಿಯ ಹಾಲ ಕರೆದು ಒಲೆಯ ಮೇಲಿಕ್ಕೆ, ಇಕ್ಕಿದ ಹಾಲ ಬೆಕ್ಕು ಕುಡಿಯಿತ್ತು, ಬೆಣ್ಣೆಯ ಮುಂದಿಟ್ಟುಕೊಂಡಳುತಿರ್ದ ಕಾಣಾ ಗುಹೇಶ್ವರಾ.