Index   ವಚನ - 2    Search  
 
ಅಂಗದಲ್ಲಿ ಲೀಯವಾಗಿ ತೋರುವುದೆಲ್ಲ ರೂಪೋ, ವಿರೂಪೋ ? ಎಂಬುದ ತಾನರಿತಲ್ಲಿ, ಅಂಗ ಅರಿಯಿತ್ತೋ, ಆತ್ಮ ಅರಿಯಿತ್ತೋ ? ಇಂತೀ ಉಭಯದ ಸಂದಣಿಯಲ್ಲಿ ಗೊಂದಳಗೊಳಲಾರದೆ, ಆರಾರೆಂದಂತೆ ಆರೈಕೆಯಲ್ಲಿದ್ದು; ತಾನು ತಾನಾದವಂಗೆ ಮತ್ತೇನೂ ಎನಲಿಲ್ಲ, ಕಾಮಧೂಮ ಧೂಳೇಶ್ವರಾ.