Index   ವಚನ - 4    Search  
 
ಅಂಗ ಪ್ರಾಣ ಸಂಗವುಳ್ಳನ್ನಕ್ಕ, ಲಿಂಗಪೂಜೆಯೆಂಬ ದಂದುಗ ಬಿಡದು. ಈ ಹೊರಗು ಒಳಗಾಗಿಯಲ್ಲದೆ, ಪ್ರಾಣಲಿಂಗಿಯೆಂಬ ಸಂಬಂಧಿಯಲ್ಲ. ಲಿಂಗಕ್ಕೆ ಪ್ರಾಣ, ಪ್ರಾಣಕ್ಕೆ ಲಿಂಗ ಉಭಯಸಂಬಂಧವಾದಲ್ಲಿ, ಉರಿ ಕೊಂಡ ಕರ್ಪುರಕ್ಕೆ ತೊಡರುವುದಕ್ಕೆ ಠಾವಿಲ್ಲ, ಕಾಮಧೂಮ ಧೂಳೇಶ್ವರಾ.