Index   ವಚನ - 15    Search  
 
ಅರಿವು ಮರವೆಯೆಂಬ ಉಭಯದ ಭೇದವ ತಿಳಿದಲ್ಲಿ, ಅಕ್ಷಿಯ ಮುಚ್ಚಿದಲ್ಲಿ ಬಯಲು, ಬಿಟ್ಟಲ್ಲಿ ಒಡಲುಗೊಂಡಿತ್ತು. ಉಭಯದೃಷ್ಟವೆಂಬುದು ಇಷ್ಟಲ್ಲದಿಲ್ಲ. ಇಷ್ಟವ ಹಿಡಿದಲ್ಲಿ ಕ್ರೀ, ಬಿಟ್ಟಲ್ಲಿ ಜ್ಞಾನವೆಂಬ ಕಟ್ಟಣೆವುಂಟೆ ? ಕಾಷ್ಠವ ಹಿಡಿದ ಅಗ್ನಿಗೆ, ಅಗ್ನಿಯಲ್ಲಿ ನಷ್ಟವಾದ ಕಾಷ್ಠಕ್ಕೆ, ಕೆಟ್ಟ ಮತ್ತೆ ಕೆಂಡವೆಂಬುದಿಲ್ಲ. ನಷ್ಟವಾದ ಮತ್ತೆ ಕಟ್ಟಿಗೆಯೆಂಬುದಿಲ್ಲ. ಕ್ರೀ ಭಾವ ಅಳವಟ್ಟು, ಭಾವ ಶೂನ್ಯವಾದಲ್ಲಿ ಕಾಮಧೂಮ ಧೂಳೇಶ್ವರ ತಾನೂ ತಾನೆ.