ಧರೆಯ ಮೇಲೆ ನಿಂದು ಹೊಡೆವಡಿಸಿಕೊಂಬ
ದೈವದ ಕುರುಹು ಎಲ್ಲಿ ಇದ್ದಿತ್ತು ಹೇಳಿರಣ್ಣಾ?
ಶರೀರದ ಮೇಲೆ ಕಟ್ಟಿ, ಕರ ಚರಣಾದಿ ಅವಯವಂಗಳು ಮುಂತಾದ
ಹಲವು ಪರಿಭ್ರಮಣದಿಂದ ಪೂಜಿಸಿಕೊಂಬುದು, ಅದಾವ ಲಿಂಗವಣ್ಣಾ ?
ಸರ್ವರೆಲ್ಲರ ಕೈಯಲ್ಲಿ, ಇದು ವಸ್ತು ಅಲ್ಲ, ಅಹುದೆಂದು
ಗೆಲ್ಲ ಸೋಲಕ್ಕೆ ಹೋರುವುದು, ಅದಾವ ವಸ್ತುವಿನ ಕುರುಹಣ್ಣಾ ?
ಇಂತೀ ಸ್ಥಾವರ ಚರ ಅರಿವಿನ ಕುರುಹೆಂಬುದೊಂದು ಸೆರಗ ತೋರಾ ?
ಅದು ನುಡಿವಡೆ ಸಮಯಕ್ಕೆ ದೂರ.
ಅದು ಮುನ್ನವೆ ಅರಿದರಿವ ಈಗ ಕುರುಹಿಡುವಲ್ಲಿ,
ಅದು ಪರಿಭ್ರಮಣ ಭ್ರಾಂತಿ.
ಇಂತೀ ಕರ್ಮಕಾಂಡ,
ಇಂತಿವನರಿದು ಬೆರೆದೆನೆಂಬ ಜ್ಞಾನಕಾಂಡ.
ಸುಮುದ್ರಿತವಾಗಿ, ಆ ಸುಮುದ್ರೆಯಲ್ಲಿ ಸೂತಕ ನಿಂದು,
ಅದೇತಕ್ಕೂ ಒಡಲಿಲ್ಲದಿಪ್ಪುದು,
ಕಾಮಧೂಮ ಧೂಳೇಶ್ವರ ತಾನು ತಾನೆ.