Index   ವಚನ - 3    Search  
 
ಅರಿವನಣಲೊಳಗಿಕ್ಕಿ ಅಗಿವುತ್ತಿದೆ ಮರ್ತ್ಯಲೋಕವೆಲ್ಲವು. ಅರಿವು ಉಳಿಯಲರಿಯದೆ ಕೆಟ್ಟಿತ್ತು ಲೋಕವೆಲ್ಲವು. ನಾನೆಂತು ಬದುಕುವೆನಣ್ಣಾ? ಕತ್ತಲೆ ಬೆಳಗ ಕಾಂಬ ಸಂದೇಹಿ ನಾನೊಬ್ಬಳು. ಎನ್ನ ಕಣ್ಣ ಕಟ್ಟಿ ಕನ್ನಡಿಯ ತೋರಿತ್ತೊ ಅಜಗಣ್ಣಾ ನಿನ್ನ ಯೋಗ.