Index   ವಚನ - 5    Search  
 
ಅಹುದಹುದು ಶಿವಶರಣರ ಮಹಿಮೆ ಆರಿಗೆಯೂ ಕಾಣಬಾರದು. ಕಬ್ಬುನ ಉಂಡ ನೀರಿನಂತೆ, ಕಬ್ಬಿಸಿಲುಂಡ ಅರಿಸಿನದಂತೆ, ಉರಿಯೊಳಡಗಿದ ಕರ್ಪುರದಂತೆ, ಬಯಲನಪ್ಪಿದ ವಾಯುವಿನಂತೆ ಇಪ್ಪ ನಿಲವು ನುಡಿದು ಹೇಳಿಹೆನೆಂಬ ಮಾತಿಂಗೆ ಅಳವಡುವುದೆ? ಅರಿವಡೆ ಮತಿಯಿಲ್ಲ, ನೆನೆವಡೆ ಮನವಿಲ್ಲ ಎನ್ನ ಅಜಗಣ್ಣ ತಂದೆಯನೊಳಕೊಂಡಿಪ್ಪ ನಿಮ್ಮ ಮಹಿಮೆಗೆ ನಮೋ ನಮೋ ಎನುತಿರ್ದೆನು.