Index   ವಚನ - 6    Search  
 
ಅದ್ವೈತವ ನೆಲೆಗೊಳಿಸಿ ಎರಡಳಿದೆನೆಂಬವರು ಶಿಶುಕಂಡ ಕನಸಿನಂತಿರಬೇಕಲ್ಲದೆ, ನುಡಿದು ಹೇಳುವನ್ನಕ್ಕರ ಭಿನ್ನವಲ್ಲದೇನು ಹೇಳಾ? ಅರಿವರತು ಮರಹು ನಷ್ಟವಾಗಿ ಗುರುವ ತೋರಿದೆನೆಂಬರು. ಇದಿರಿಂಗೆ ಕರುಳಕಲೆಯನರುಹುವ ಪರಿಯೆಂತು ಹೇಳಾ? ಮನದ ಕೊನೆಯ ಮೊನೆಯ ಮೇಲಣ, ಅರಿವಿನ ಕಣ್ಣಮುಂದೆ ಸ್ವಯಂಪ್ರಕಾಶ ತೋರುತ್ತಿದ್ದಡೆ ತಾನಾಗಬಲ್ಲನೆ? ನೆರೆಯರಿತು ಮರೆಯಬಲ್ಲಡೆ ಎನ್ನ ಅಜಗಣ್ಣನಂತೆ ಶಬ್ದಮುಗ್ದನಾಗಿರಬೇಕಲ್ಲದೆ, ಶಬ್ದಸಂದಣಿಯ ಮಾತು ಸಯವಲ್ಲ ನೋಡಯ್ಯಾ.