Index   ವಚನ - 12    Search  
 
ಕಣ್ಣ ಮೊದಲಲ್ಲಿ ಕುಳ್ಳಿರ್ದು ಬಣ್ಣದೋರುವ ಪರಿಯ ನೋಡಾ ಅವ್ವಾ. ಬಣ್ಣವಿಲ್ಲದ ಬಣ್ಣವನುಟ್ಟು ಸುಳಿದನು. ಈ ಅಜಗಣ್ಣನ ಯೋಗಕ್ಕೆ ಬೆರಗಾದೆನವ್ವಾ. ಈ ಅರಿವೆಂತುಟೆಲ್ಲವನೊಳಗಿಟ್ಟುಕೊಂಡನು, ಶಿವಗಣಸಂಚ ಶಿವಯೋಗಿ ಅಜಗಣ್ಣದೇವನು.