Index   ವಚನ - 15    Search  
 
ಗುರುವಚನದಿಂದಲ್ಲದೆ ಲಿಂಗವನರಿಯಬಾರದು. ಗುರುವಚನದಿಂದಲ್ಲದೆ ಜಂಗಮವನರಿಯಬಾರದು. ಗುರುವಚನದಿಂದಲ್ಲದೆ ಪ್ರಸಾದವನರಿಯಬಾರದು. ಗುರುವಚನದಿಂದಲ್ಲದೆ ತನ್ನ ತಾನರಿಯಬಾರದು. ಹಿಂದಣ ಜನ್ಮದಲ್ಲಿ ಲಿಂಗವ ಪೂಜಿಸಿ ಇಂದು ಜ್ಞಾನೋದಯವಾದಡೆ ಗುರುವಿಲ್ಲದ ಮುನ್ನ ಆಯಿತ್ತೆನ್ನಬಹುದೆ? ತನ್ನಲ್ಲಿ ತಾನು ಸನ್ನಹಿತನಾದೆಹೆನೆಂದಡೆ ಗುರುವಿಲ್ಲದೆ ಆಗದು ಕೇಳಾ. ಎನ್ನ ಅಜಗಣ್ಣನೆಂಬ ಗುರುವಿಲ್ಲದೆ ಆರೂಢಿಯ ಕೂಟ ಸಮನಿಸದು ಕೇಳಾ.