Index   ವಚನ - 16    Search  
 
ಘನಮಹಿಮ ಶರಣರ ಸಂಗದಿಂದ ಘನಕ್ಕೆ ಘನ ವೇದ್ಯವಾದ ಬಳಿಕ ಅರಿಯಲಿಲ್ಲ, ಮರೆಯಲಿಲ್ಲ; ಕೂಡಲಿಲ್ಲ, ಅಗಲಲಿಲ್ಲ. ಮನ ಮೇರೆದಪ್ಪಿ ನಿರವಯಲಾದ ಸುಖವ ಶೂನ್ಯ ನಿಶ್ಶೂನ್ಯವೆಂದು ನುಡಿಯಲುಂಟೆ? ಶಬ್ದಮುಗ್ಧವಾಗಿ ಎನ್ನ ಅಜಗಣ್ಣತಂದೆಯ ಬೆರಸಿದ ಬಳಿಕ ಉರಿಯುಂಡ ಕರ್ಪೂರದಂತಾದೆನಯ್ಯಾ.