Index   ವಚನ - 17    Search  
 
ಜಲದ ಚಿತ್ತಾರದ ಕೊರಳಿನಲ್ಲಿ ದಾರವಿಲ್ಲದ ಮುತ್ತಿನ ಸರವು ನೋಡಾ! ಚಿತ್ತಾರವಳಿಯದೆ, ಮುತ್ತು ಉಳಿಯದೆ ನಿಂದ ನಿಲವಿನ ಪರಿಯ ನೋಡಾ! ಗಮನವಿಲ್ಲದ ಗಂಭೀರ, ಶಬುದವಿಲ್ಲದ ಸಾರಾಯ ಸಮತೆಯಾಗಿ ನಿಂದ ಅಜಗಣ್ಣಂಗೆ ಇನ್ನಾರು ಸರಿ ಎಂಬೆನು.