Index   ವಚನ - 27    Search  
 
ನುಡಿಯ ಹಂಗಿನ್ನೂ ನಿಮಗೆ ಹಿಂಗದು, ನಡೆಯನೆಂತು ಪರರಿಗೆ ಹೇಳುವಿರಿ? ಒಡಲ ಹಂಗಿನ ಸುಳುಹು ಬಿಡದು; ಎನ್ನೊಡನೆ ಮತ್ತೇತರ ಅನುಭವವಣ್ಣಾ? ತಾನಾದಲ್ಲದೆ ಇದಿರಿಂಗೆ ಹೇಳಬಹುದೆ? ಅರಿವ ತೋರಬಲ್ಲಡೆ ತನ್ನನರುಹದೆ ಅರಿವನು ಕಾಣಾ ಎನ್ನ ಅಜಗಣ್ಣತಂದೆ.