Index   ವಚನ - 43    Search  
 
ಅಮೃತದ್ರವ್ಯದಲ್ಲಿ ಅಮೃತವಿಶೇಷವ ಮಾಡಲಿಕ್ಕಪ್ಪುದಲ್ಲದೆ ಕಹಿ ಕಟುಕಂಗಳಲ್ಲಿ ಮಧುರಸಾರಕ್ಕೆ ಕ್ರಮಗುಣವುಂಟೆ? ಇಂತೀ ಭಾವಕ್ರೀ ವರ್ತನಶುದ್ಧವುಳ್ಳವರಲ್ಲಿ ಅಲ್ಲದೆ ವರ್ತನಹೀನರಲ್ಲಿ ಉಂಟೆ ಸ್ವಯಜ್ಞಾನಸಂಬಂಧ? ಇಂತಿವು ಕುಲವಂಶದಲ್ಲಿ ಅಲ್ಲದೆ ಸತ್ಕುಲ ತದ್ರೂಪಿಲ್ಲ. ಇಂತೀ ಆಚರಣೆ ಆಶ್ರಿತದ ಭೇದ. ಈ ಆತ್ಮನ ಭೇದವನರಿತು ಭೇದಿಸಬೇಕು, ಸದ್ಯೋಜಾತಲಿಂಗದಲ್ಲಿ.