Index   ವಚನ - 98    Search  
 
ಪೃಥ್ವೀಚಕ್ರಕ್ಕೆ ಶರೀರವೇ ಪೂರ್ವ, ಶರೀರದೊಳಗಣ ಪೃಥ್ವಿಯೇ ಪಶ್ಚಿಮ, ಜಿಹ್ವೆಯಲ್ಲಿ ಕೊಂಬ ಆಹಾರಾದಿಪೃಥ್ವಿಯೇ ಉತ್ತರ, ಅಧೋಮುಖದಲ್ಲಿ ವಿಸರ್ಜನರೂಪಮಾದ ಪುತ್ರಾದಿಪೃಥ್ವಿಯೇ ದಕ್ಷಿಣ, ಪೂರ್ವರೂಪವಾದ ಶರೀರಕ್ಕೂ ದಕ್ಷಿಣರೂಪವಾದ ಪುತ್ರಾದಿಗಳಿಗೂ ಸಂಧಿಕಾಲಮಾಗಿರ್ಪ ಅರ್ಥಾದಿಪೃಥ್ವಿಯೇ ಆಗ್ನೇಯ, ಪುತ್ರಾದಿ ದಕ್ಷಿಣಪೃಥ್ವಿಗೂ ಧಾತು ರೂಪಮಾದ ಅಂತಃಪಶ್ಚಿಮಪೃಥ್ವಿಗೂ ಸಂಧಿಕಾಲಮಾಗಿರ್ಪ ಮಲವಿಸರ್ಜನರೂಪಮಾದ ಪೃಥ್ವಿಯೇ ನೈರುತ್ಯ, ಆ ಶರೀರದೊಳಗಣ ಪೃಥ್ವಿಗೂ ಆಹಾರರೂಪವಾದ ಜಿಹ್ವೆಯಲ್ಲಿರ್ಪ ಉತ್ತರಪೃಥ್ವಿಗೂ ಸಂಧಿಕಾಲದಲ್ಲಿ ಪರಮಪವಿತ್ರಮಾಗಿ ಪರಿಪಕ್ವಮಯವಾಗಿ ಪ್ರಸಾದರೂಪವಾದ ಅನ್ನಾದಿ ಭೋಜನಕ್ರಿಯೆಯೆಂಬ ಪೃಥ್ವಿಯೇ ಈಶಾನ್ಯ. ಜಲಚಕ್ರಕ್ಕೆ ಗುಹ್ಯಜಲವೇ ಪೂರ್ವ, ಶರೀರಜಲವೇ ದಕ್ಷಿಣ, ಜಿಹ್ವಾಜಲವೇ ಪಶ್ಚಿಮ, ನೇತ್ರಜಲವೇ ಉತ್ತರ, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಸಂಧಿಕಾಲದಲ್ಲಿರ್ಪ ಬಿಂದುಜಲವೇ ಆಗ್ನೇಯ, ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ಸಂಧಿಯಲ್ಲಿರ್ಪ ವಾತ ಪಿತ್ತ ಶ್ಲೇಷ್ಠಜಲವೇ ನೈರುತ್ಯ, ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ನೇತ್ರದಲ್ಲಿರ್ಪ ಉತ್ತರಜಲಕ್ಕೂ ಸಂಧಿಯಲ್ಲಿರ್ಪ ಉಚ್ಛ್ವಾಸವಾಯುಮುಖದಲ್ಲಿ ದ್ರವಿಸುತ್ತಿರ್ಪ ಜಲವೇ ವಾಯವ್ಯಜಲ, ನೇತ್ರದಲ್ಲಿರ್ಪ ಜಲಕ್ಕೂ ಗುಹ್ಯದಲ್ಲಿರ್ಪ ಜಲಕ್ಕೂ ಸಂಧಿಯಲ್ಲಿ ಮನೋಮುಖದಲ್ಲಿ ದ್ರವಿಸುತ್ತಿರ್ಪ ಮೋಹಜಲವೇ ಈಶಾನ್ಯಜಲ. ಅಗ್ನಿಚಕ್ರಕ್ಕೆ ಗುಹ್ಯದಲಿರ್ಪ ತೇಜೊರೂಪಮಾದ ಆಗ್ನಿಯೇ ಪೂರ್ವ, ಉದರದಲ್ಲಿರ್ಪ ಅಗ್ನಿಯೇ ದಕ್ಷಿಣ, ನೇತ್ರದಲ್ಲಿರ್ಪ ಆಗ್ನಿಯೇ ಪಶ್ಚಿಮ, ಹಸ್ತದಲ್ಪಿರ್ಪ ಸಂಹಾರಾಗ್ನಿಯೇ ಉತ್ತರ, ಗುಹ್ಯದಲ್ಲಿರ್ಪ ಪೂರ್ವಾಗ್ನಿಗೂ ಉದರದಲ್ಲಿರ್ಪ ದಕ್ಷಿಣಾಗ್ನಿಗೂ ಸಂಧಿಯಲ್ಲಿ ಬೀಜಸ್ಥಾನದಲ್ಲಿರ್ಪ ಕಾಮಾಗ್ನಿಯೇ ಆಗ್ನೇಯಾಗ್ನಿ, ಉದರದಲ್ಲಿರ್ಪ ಅಗ್ನಿಗೂ ನೇತ್ರದಲ್ಲಿರ್ಪ ಪಶ್ಚಿಮಾಗ್ನಿಗೂ ಸಂಧಿಯಲ್ಲಿರ್ಪ ಕ್ರೋಧ ಮತ್ಸರ ರೂಪವಾಗಿರ್ಪ ತಾಮಸಾಗ್ನಿಯೇ ನೈರುತ್ಯಾಗ್ನಿ, ನೇತ್ರದಲ್ಲಿರ್ಪ ಅಗ್ನಿಗೂ ಹಸ್ತದಲ್ಲಿರ್ಪ ಉತ್ತರಾಗ್ನಿಗೂ ಸಂಧಿಯಲ್ಲಿ ವಸ್ತುಗ್ರಹಣಚಲನೋದ್ರೇಕಾಗ್ನಿಯೇ ವಾಯವ್ಯಾಗ್ನಿ, ಆ ಹಸ್ತಕ್ಕೂ ಗುಹ್ಯಕ್ಕೂ ಸಂಧಿಯಲ್ಲಿ ಧರ್ಮಪ್ರಜಾಸೃಷ್ಟಿನಿಮಿತ್ತ ಪಾಣಿಗ್ರಹಣಮಪ್ಪಲ್ಲಿ ಸಾಕ್ಷಿರೂಪಮಾದ ಹೋಮಾಗ್ನಿಯೇ ಈಶಾನ್ಯಾಗ್ನಿ. ವಾಯುಚಕ್ರಕ್ಕೆ ನಾಸಿಕಚಕ್ರದಲ್ಲಿರ್ಪ ಪ್ರಾಣವಾಯುವೇ ಪೂರ್ವವಾಯು, ಹೃದಯವೇ ಪಶ್ಚಿಮ, ಚಲನಾತ್ಮಕವಾದ ಚೈತನ್ಯವಾಯುಮುಖವಿಕಸನವೇ ಉತ್ತರವಾಯು, ಗಂಧವಿಸರ್ಜನೆಯೇ ದಕ್ಷಿಣವಾಯು, ನಾಸಿಕದಲ್ಲಿರ್ಪ ಪೂರ್ವವಾಯುವಿಗೂ ಗಂಧದಲ್ಲಿರ್ಪ ದಕ್ಷಿಣವಾಯುವಿಗೂ ಸಂಧಿಯಲ್ಲಿರ್ಪ ಗಂಧವಾಯುವೇ ಆಗ್ನೇಯವಾಯು, ಗುದದಲ್ಲಿರ್ಪ ವಾಯುವಿಗೂ ಹೃದಯದಲ್ಲಿರ್ಪ ಪಶ್ಚಿಮವಾಯುವಿಗೂ ಸಂಧಿಯಲ್ಲಿ ಆದ್ಯನಾದಿವ್ಯಾಧಿಗಳಂ ಕಲ್ಪಿಸಿ ದೀಪನಾಗ್ನಿಯಲ್ಲಿ ಕೂಡಿಸಿ ಅನಂತಮಲವಂ ಮಾಡಿ ಅಧೋಮುಖದಲ್ಲಿ ಕೆಡವುತ್ತಿರ್ಪ ತಾಮಸವಾಯುವೇ ನೈರುತ್ಯವಾಯು, ಹೃದಯವಾಯುವಿಗೂ ವದನದಲ್ಲಿರ್ಪ ಉತ್ತರವಾಯುವಿಗೂ ಸಂಧಿಯಲ್ಲಿರ್ಪ ಕಂಠದಲ್ಲಿ ಹಸನ ರೋದನ ಗರ್ಜನಾದಿಗಳಂ ಮಾಡುತ್ತಿರ್ಪ ವಾಯುವೇ ವಾಯವ್ಯವಾಯು, ವದನದಲ್ಲಿರ್ಪ ವಾಯುವಿಗೂ ನಾಸಿಕದಲ್ಲಿರ್ಪ ವಾಯುವಿಗೂ ಸಂಧಿಯಲ್ಲಿರ್ಪ ಅಕ್ಷರಾತ್ಮಕವಾಯುವೇ ಈಶಾನ್ಯ. ಆಕಾಶಚಕ್ರಕ್ಕೆ ಶ್ರೋತ್ರದಲ್ಲಿರ್ಪ ಆಕಾಶವೇ ಪೂರ್ವ, ಶರೀರದಲ್ಲಿರ್ಪ ಆಕಾಶವೇ ಪಶ್ಚಿಮ, ಪಾದದಲ್ಲಿರ್ಪ ಆಕಾಶವೇ ದಕ್ಷಿಣ, ಜಿಹ್ವೆಯಲ್ಲಿರ್ಪ ಆಕಾಶವೇ ಉತ್ತರ, ಶ್ರೋತ್ರದಲ್ಲಿರ್ಪ ಪೂರ್ವಾಕಾಶಕ್ಕೂ ಪಾದದಲ್ಲಿರ್ಪ ದಕ್ಷಿಣಾಕಾಶಕ್ಕೂ ಕಿವಿಯಲ್ಲಿ ಪಾದದಲ್ಲಿ ಗಮಿಸುತ್ತಿರ್ಪಲ್ಲಿ ಮುಂದೆ ಗಮಿಸುತ್ತಿರ್ಪಾಕಾಶವೇ ಆಗ್ನೇಯಾಕಾಶ, ಪಾದದಲ್ಲಿರ್ಪ ಆಕಾಶಕ್ಕೂ ಶರೀರದಲ್ಲಿರ್ಪ ಪಶ್ಚಿಮಾಕಾಶಕ್ಕೂ ಸಂಧಿಯಲ್ಲಿ ಮಲಮೂತ್ರ ವಿಸರ್ಜನಾಕಾಶವೇ ನೈರುತ್ಯಾಕಾಶ, ಆ ಶರೀರದೊಳಗಿರ್ಪ ಆಕಾಶಕ್ಕೂ ಜಿಹ್ವೆಯಲ್ಲಿರ್ಪ ಉತ್ತರಾಕಾಶಕ್ಕೂ ಸಂಧಿಯಲ್ಲಿ ಗುಣಗ್ರಹಣವಂ ಮಾಡುತ್ತಿರ್ಪ ಹೃದಯವೇ ವಾಯವ್ಯಾಕಾಶ, ಜಿಹ್ವೆಯಲ್ಲಿರ್ಪ ಆಕಾಶಕ್ಕೂ ಶ್ರೋತ್ರದಲ್ಲಿರ್ಪ ಆಕಾಶಕ್ಕೂ ಸಂಧಿಯಲ್ಲಿ ಗುರುವು ಮುಖದಿಂದುಪದೇಶಿಸಲು, ಶಿಷ್ಯನು ಕರ್ಣಮುಖದಲ್ಲಿ ಗ್ರಹಿಸಲು, ತನ್ಮಂತ್ರಮಧ್ಯದಲ್ಲಿ ಪ್ರಕಾಶಿಸುತ್ತಿರ್ಪ ಆಕಾಶವೇ ಈಶಾನ್ಯಾಕಾಶ, ಆತ್ಮಚಕ್ರಕ್ಕೆ ವಾಸನಾಜ್ಞಾನವೇ ಪಶ್ಚಿಮ, ರುಚಿಜ್ಞಾನವೇ ಉತ್ತರ, ಸ್ಪರ್ಶಜ್ಞಾನವೇ ಪೂರ್ವ, ರೂಪಜ್ಞಾನವೇ ದಕ್ಷಿಣ. ಸ್ಪರ್ಶನರೂಪಮಾದ ಪೂರ್ವಜ್ಞಾನವೇ ಜೀವನು, ರೂಪಜ್ಞತ್ವಮುಳ್ಳ ದಕ್ಷಿಣಜ್ಞಾನವೇ ಶರೀರ. ಸ್ಪರ್ಶನದಲ್ಲಿ ಜೀವನು ವ್ಯಾಪ್ತನಾದಂತೆ ರೂಪಜ್ಞಾನದಲ್ಲಿ ಶರೀರವು ವ್ಯಾಪ್ತಮಾಗಿರ್ಪುದರಿಂ ರೂಪಜ್ಞಾನತ್ವವೇ ಶರೀರ, ಸ್ಪರ್ಶನಜ್ಞಾನತ್ವವೇ ಜೀವ. ತತ್ಸಂಧಿಯಲ್ಲಿ ತೇಜೋವಾಯುರೂಪಮಾಗಿರ್ಪ ಮನೋಜ್ಞಾನತ್ವವೇ ಆಗ್ನೇಯಾತ್ಮನು. ಮನೋಜ್ಞಾನಕ್ಕೂ ಪಶ್ಚಿಮದಲ್ಲಿರ್ಪ ವಾಸನಾಜ್ಞಾನಕ್ಕೂ ಸಂಧಿಯಲ್ಲಿ ಜನ್ಮಾಂತರವಾಸನಾಜ್ಞಾನವೇ ಪರೋಕ್ಷಜ್ಞಾನ, ರೂಪಜ್ಞಾನವೇ ಪ್ರತ್ಯಕ್ಷಜ್ಞಾನ. ಈ ಎರಡರ ಮಧ್ಯದಲ್ಲಿ ಭಾವಜ್ಞತ್ವಮಿರ್ಪುದು. ಜಾಗ್ರತ್ಸ್ವಪ್ನಗಳ ಮಧ್ಯದಲ್ಲಿ ಸುಷುಪ್ತಿಯು ಇರ್ಪಂತೆ ಸುಷುಪ್ತಿಗೆ ತನ್ನಲ್ಲಿರ್ಪ ಸ್ವಪ್ನವೇ ಪ್ರತ್ಯಕ್ಷಮಾಗಿ ತನಗೆ ಬಾಹ್ಯಮಾಗಿರ್ಪ ಜಾಗ್ರವು ಪ್ರತ್ಯಕ್ಷಮಾಗಿಹುದು. ಅಂತು ಭಾವಜ್ಞತ್ವಕ್ಕೆ ರೂಪಜ್ಞಾನಪ್ರತ್ಯಕ್ಷಮಾಗಿ ವಾಸನಾಜ್ಞಾನಕ್ಕೆ ತಾನೇ ಮರೆಯಾಗಿರ್ಪುದರಿಂ ಆ ಭಾವಜ್ಞಾನವೇ ನೈರುತ್ಯಾತ್ಮನು. ಆ ವಾಸನಾಜ್ಞಾನಕ್ಕೂ ಉತ್ತರದಲ್ಲಿರ್ಪ ರುಚಿಜ್ಞಾನಕ್ಕೂ ಸಂಧಿಯಲ್ಲಿ ರುಚಿಯೆಂದರೆ ಅನುಭವಪದಾರ್ಥ, ತಜ್ಞಾನವೇ ರುಚಿಜ್ಞಾನ. ವಾಸನಾಜ್ಞಾನವೇ ಪರೋಕ್ಷಜ್ಞಾನ, ಅದೇ ಭೂತಜ್ಞಾನ, ಆ ರುಚಿಜ್ಞಾನವೇ ಭವಿಷ್ಯಜ್ಞಾನ. ಅಂತಪ್ಪ ಭೂತಭವಿಷ್ಯತ್ತುಗಳ ಮಧ್ಯದಲ್ಲಿ ವಾಯುರೂಪಮಾದ ಶಬ್ದಮುಖದಲ್ಲಿ ತಿಳಿವುತ್ತಿರ್ಪ ಶಬ್ದಜ್ಞಾನವೇ ವಾಯವ್ಯಾತ್ಮನು. ರುಚಿಜ್ಞಾನಕ್ಕೂ ಸ್ಪರ್ಶನಜ್ಞಾನಕ್ಕೂ ಮಧ್ಯದಲ್ಲಿ ಜೀವನು ರುಚಿಗಳನನುಭವಿಸುವ ಸಂಧಿಯಲ್ಲಿರ್ಪ ಶಿವಜ್ಞಾನಮಧ್ಯದಲ್ಲಿರುವನೇ ಈಶಾನ್ಯಾತ್ಮನು. ಜ್ಞಾನಾನಂದಮೂರ್ತಿಯೇ ಕರಕಮಲದಲ್ಲಿ ಇಷ್ಟಲಿಂಗಮಾಗಿ, ಆ ಶಿವಜ್ಞಾನವೇ ಹೃತ್ಕಮಲಮಧ್ಯದಲ್ಲಿ ರುಚ್ಯನುಭವಸಂಧಿಯಲ್ಲಿ ಪ್ರಾಣಲಿಂಗಮಾಗಿ, ಪ್ರತ್ಯಕ್ಷ ಪರೋಕ್ಷಂಗಳಿಗೆ ತಾನೇ ಕಾರಣವಾಗಿ, ಆ ಶಿವಜ್ಞಾನಂಗಳು ಭಾವದಲ್ಲೊಂದೇ ಆಗಿ ಪ್ರಕಾಶಿಸಿದಲ್ಲಿ ಭಾವದಲ್ಲಿರ್ಪ ತಾಮಸವಳಿದು, ಪ್ರತ್ಯಕ್ಷ ಪರೋಕ್ಷಂಗಳೊಂದೇ ಆಗಿ, ಪರೋಕ್ಷಜ್ಞಾನದಲ್ಲಿ ಪ್ರತ್ಯಕ್ಷಭಾವಂಗಳಳಿದು, ಭೂತಭವಿಷ್ಯಂಗಳೊಂದೇ ಆಗಿ ಅಖಂಡಮಯಮಾಗಿ ಎಲ್ಲವೂ ಒಂದೆಯಾಗಿರ್ಪುದೇ ಆಗ್ನೇಯ. ಅದಕ್ಕೆ ಇಷ್ಟಪ್ರಾಣಂಗಳೆಂಬೆರಡು ದಳಂಗಳು. ವಿಶುದ್ಧದಲ್ಲಿ ಪ್ರಮಾಣಕ್ಕೆ ಪೂರ್ವಾತ್ಮನಾದ ಜೀವನೇ ಸ್ಥಾನ, ಸಂಶಯಕ್ಕೆ ಆಗ್ನೇಯಾತ್ಮವಾದ ಮನವೇ ಸ್ಥಾನ, ದೃಷ್ಟಾಂತಕ್ಕೆ ದಕ್ಷಿಣಾತ್ಮಕವಾದ ಶರೀರವೇ ಸ್ಥಾನ, ಅವಯವಕ್ಕೆ ನೈರುತ್ಯವಾದ ಭಾವವೇ ಸ್ಥಾನ, ನಿರ್ಣಯಕ್ಕೆ ಪಶ್ಚಿಮಾತ್ಮಕವಾದ ಶಬ್ದಜ್ಞಾನವೇ ಸ್ಥಾನ, ಜಲ್ಪಕ್ಕೆ ವಾಯುವ್ಯಾತ್ಮವಾದ ಶಬ್ದಜ್ಞಾನವೇ ಸ್ಥಾನ, ಹೇತ್ವಭಾವಕ್ಕೆ ರುಚಿಜ್ಞತ್ವವೇ ಸ್ಥಾನ. ಜಾತಿಯೆಂದರೆ ಪದಾರ್ಥನಿಷ್ಠಧರ್ಮ. ಆ ಧರ್ಮಕ್ಕೆ ಈಶಾನ್ಯಾತ್ಮನಾದ ಶಿವನೇ ಸ್ಥಾನ, ಪ್ರಮೇಯಕ್ಕೆ ಶ್ರೋತ್ರದಲ್ಲಿರ್ಪ ವಿಶುದ್ಧರೂಪಮಾದ ಪೂರ್ವಾಕಾಶವೇ ಸ್ಥಾನ, ಪ್ರಯೋಜನಕ್ಕೆ ಧಾವತೀರೂಪಮಾದ ಆಗ್ನೇಯಾಕಾಶವೇ ಸ್ಥಾನ, ಸಿದ್ಧಾಂತಕ್ಕೆ ಪದದಲ್ಲಿರ್ಪ ದಕ್ಷಿಣಾಕಾಶವೇ ಸ್ಥಾನ, ತರ್ಕಕ್ಕೆ ಮಲವಿಸರ್ಜನರೂಪವಾದ ನೈರುತ್ಯಾಕಾಶವೇ ಸ್ಥಾನ, ಛಲಕ್ಕೆ ಜಿಹ್ವೆಯಲ್ಲಿ ವಾಗ್ರೂಪಮಾಗಿರ್ಪ ಉತ್ತರಾಕಾಶವೇ ಸ್ಥಾನ, ನಿಗ್ರಹಕ್ಕೆ ಉಪದೇಶಮಧ್ಯದಲ್ಲಿರ್ಪ ಈಶಾನ್ಯಾಕಾಶವೇ ಸ್ಥಾನ. ಇಂತು ಆತ್ಮಾಕಾಶಮಾಗಿರ್ಪ ಷೋಡಶದಳಂಗಳಿಂ ಪ್ರಕಾಶಿಸುತ್ತಿರ್ಪುದೇ ವಿಶುದ್ಧಿಚಕ್ರವು. ತದ್ಬೀಜಮಾಗಿರ್ಪ ಷೋಡಶಸ್ವರಂಗಳಲ್ಲಿ ಹ್ರಸ್ವಸ್ವರಂಗಳೆಲ್ಲವೂ ಆತ್ಮಚಕ್ರಬೀಜ ದೀರ್ಘಸ್ವರಂಗಳೆಲ್ಲವೂ ಆಕಾಶಚಕ್ರಬೀಜ, ಮುಕುಳನವೇ ಹ್ರಸ್ವ; ಅದು ಆತ್ಮರೂಪಮಾದ ಸಂಹಾರಮಯಮಾಗಿಹುದು. ವಿಕಸನವೇ ದೀರ್ಘ; ಅದು ಮಿಥ್ಯಾರೂಪಮಾದ ಸೃಷ್ಟಿಮಯಮಾಗಿಹುದು. ಇಂತಪ್ಪ ಆತ್ಮಾಕಾಶಚಕ್ರಗಳೆರಡೂ ಏಕಾಕಾರಮಾಗಿರ್ಪುದೇ ವಿಶುದ್ಧಿಚಕ್ರವು. ಅನಾಹತದಲ್ಲಿ ತನುವಿಗೆ ಪೂರ್ವರೂಪಮಾದ ವಾಯುವೇ ಸ್ಥಾನ, ನಿಧನಕ್ಕೆ ವಾಸನಾಗ್ರಹಣರೂಪಮಾದ ಆಗ್ನೇಯವಾಯುವೇ ಸ್ಥಾನ, ಸಹಜವೆಂದರೆ ಪ್ರಕೃತಿ, ಆ ಸಹಜಕ್ಕೆ ದಕ್ಷಿಣರೂಪಮಾದ ವಿಸರ್ಜನವಾಯುವೇ ಸ್ಥಾನ, ಸೂಹೃತಿಗೆ ನೈರುತ್ಯರೂಪಮಾದ ಗರ್ಭವಾಯುವೇ ಸ್ಥಾನ, ಸುತಕ್ಕೆ ಪಶ್ಚಿಮದಲ್ಲಿರ್ಪ ಹೃದಯವಾಯುವೇ ಸ್ಥಾನ, ರಿಪುವಿಗೆ ಕಂಠದಲ್ಲಿ ವಾಯವ್ಯರೂಪಮಾಗಿರ್ಪ ಉತ್ಕೃಷ್ಟಘೋಷವಾಯುವೇ ಸ್ಥಾನ, ಜಾಯಕ್ಕೆ ಉತ್ತರದಲ್ಲಿರ್ಪ ಜಿಹ್ವಾಚಲನವಾಯುವೇ