Index   ವಚನ - 73    Search  
 
ಬಂಧನಂ ಪಾಪರೂಪಂ ಚ ನಿರ್ಬಂಧಃ ಪುಣ್ಯರೂಪಕಃ ಸತ್ಯಜ್ಞಾನ ಸಂಬಂಧಶ್ಚ ತದ್ಯಥಾ ಶ್ರುಣು ಪಾರ್ವತಿ|| ಎಂದಕಾರಣ, ಬಂಧನದೈಕ್ಯವ ಶಿವಶರಣರೊಪ್ಪರಾಗಿ. ಅದೆಂತೆಂದಡೆ: ತೈಲ ಬತ್ತಿಯುಳ್ಳನ್ನಕ್ಕ ಜ್ಯೋತಿ ಬಯಲಾಗದು. ಎಣ್ಣೆ ಬತ್ತಿ ತೀರಿದ ಮೇಲೆ ಗೃಹದೊಳಗಣ ಜ್ಯೋತಿ ಉರಿಯಬಲ್ಲುದೆ ಹೇಳಿರಣ್ಣಾ ? ಈ ದೃಷ್ಟಾಂತದಂತೆ, ದೇಹಿಗಳ ದೇಹಮಧ್ಯದಲ್ಲಿ ಸಪ್ತಧಾತುಗಳುಳ್ಳ ಪರಿಯಂತರ ಪಂಚಾಗ್ನಿಯಿದ್ದ ಜೀವರುಗಳು ಪ್ರಾಣತ್ಯಾಗವ ಮಾಡುವುದು. ಹಾಗೆ ಶರಣನ ದೇಹಮಧ್ಯದಲ್ಲಿ ಚಿದಗ್ನಿಯಿದ್ದು, ಪ್ರಾಣ ದಗ್ಧವ ಮಾಡಿ, ವಸ್ತುವಿನಲ್ಲಿ ಎಯ್ದಿಸುತ್ತಿರಲಾಗಿ, ಆತನ ಅರಿವು ಮರವೆಗೆ ಕರ್ತರಾಗಿಪ್ಪ ತೆತ್ತಿಗತ್ತ್ವವಲ್ಲದೆ ತಾವು ಕಳಂಕರಾಗಿ, ಆತನ ವಿಕಳತೆಯಿಂದ ಐಕ್ಯವ ಮಾಡಿದಡೆ, ಆ ದ್ರೋಹ ತಮಗಲ್ಲದೆ ಆತಂಗಿಲ್ಲ. ಇಂತೀ ವಿವೇಕವುಳ್ಳ ವೀರಮಾಹೇಶ್ವರರ ಐಘಟದೂರ ರಾಮಲಿಂಗವೆಂಬೆ. ಅಲ್ಲದಿರ್ದಡೆ, ನೀ ಸಾಕ್ಷಿಯಾಗಿ ಛೀ ಎಂಬೆನು.