Index   ವಚನ - 4    Search  
 
ಎನ್ನ ಆಧಾರಚಕ್ರದಲ್ಲಿ ಆಚಾರಲಿಂಗವಾದಾತ ಬಸವಣ್ಣ. ಎನ್ನ ಸ್ವಾಧಿಷ್ಠಾನಚಕ್ರದಲ್ಲಿ ಗುರುಲಿಂಗವಾದಾತ ಬಸವಣ್ಣ. ಎನ್ನ ಮಣಿಪೂರಕ ಚಕ್ರದಲ್ಲಿ ಶಿವಲಿಂಗವಾದಾತ ಬಸವಣ್ಣ. ಎನ್ನ ಪಾಣಿಯಲ್ಲಿ ಜಂಗಮಲಿಂಗವಾದಾತ ಬಸವಣ್ಣ. ಎನ್ನ ವಾಕ್ಕಿನಲ್ಲಿ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ನಿಃಪ್ರಪಂಚದಲ್ಲಿ ಮಹಲಿಂಗವಾದಾತ ಬಸವಣ್ಣ. ಇಂತಿದನರಿದೆನಾಗಿ. ಗವರೇಶ್ವರಲಿಂಗದಲ್ಲಿರ್ದೆನಯ್ಯಾ.