Index   ವಚನ - 5    Search  
 
ಎನ್ನ ಆಧಾರಚಕ್ರದಲ್ಲಿ ಆಚಾರಲಿಂಗವಾದಾತ ಬಸವಣ್ಣ. ಎನ್ನ ಸ್ವಾಧಿಷ್ಠಾನಚಕ್ರದಲ್ಲಿ ಗುರುಲಿಂಗವಾದಾತ ಬಸವಣ್ಣ. ಎನ್ನ ಮಣಿಪೂರಕಚಕ್ರದಲ್ಲಿ ಶಿವಲಿಂಗವಾದಾತ ಬಸವಣ್ಣ. ಎನ್ನ ಪಾಣಿಯಲ್ಲಿ ಜಂಗಮಲಿಂಗವಾದಾತ ಬಸವಣ್ಣ. ಎನ್ನ ಅನಾಹುತಚಕ್ರದಲ್ಲಿ ಜಂಗಮಲಿಂಗವಾದಾತ ಬಸವಣ್ಣ. ಎನ್ನ ವಿಶುದ್ಧಿಚಕ್ರದಲ್ಲಿ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಆಜ್ಞಾಚಕ್ರದಲ್ಲಿ ಮಹಲಿಂಗವಾದಾತ ಬಸವಣ್ಣ. ಇಂತಿದನರಿದೆನಾಗಿ ಗವರೇಶ್ವರಲಿಂಗದಲ್ಲಿರ್ದೆನಯ್ಯಾ.