Index   ವಚನ - 6    Search  
 
ಎನ್ನ ಕಾಯದ ಕಳವಳವ ನಿಲಿಸಿ, ಗುರುಲಿಂಗವ ತೋರಿದ, ಎನ್ನ ಮನದ ವ್ಯಾಕುಳವ ನಿಲಿಸಿ, ಜಂಗಮಲಿಂಗವ ತೋರಿದ, ಇಂತು ಅಂತರಂಗ ಬಹಿರಂಗದಲ್ಲಿ ತಾನೆಯಾಗಿ, ಎನ್ನ ಪಾವನವ ಮಾಡಿದ, ಅಮರಗಣಂಗಳು ಮುನಿದು ಎನ್ನ ಕೈಲಾಸಕ್ಕೆ ಒಯ್ದಡೆ, ಸದ್ಯೋನ್ಮುಕ್ತಿಯ ತೋರಲೆಂದು ಮರ್ತ್ಯಕ್ಕೆ ಮರಳಿ ತಂದ ಸಂಗನಬಸವಣ್ಣನೆ ಗುರುವೆನಗೆ, ಸಂಗನಬಸವಣ್ಣನೆ ಪರವೆನಗೆ. ಸಂಗನಬಸವಣ್ಣನ ಕರುಣದಿಂದ, ಘನಕ್ಕೆ ಘನಮಹಿಮ ಅಲ್ಲಮಪ್ರಭುವಿನ ಶ್ರೀಪಾದವ ಕಂಡು ಬದುಕಿದೆನು ಕಾಣಾ, ಗವರೇಶ್ವರಾ.