Index   ವಚನ - 9    Search  
 
ಎನ್ನ ಘ್ರಾಣಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಜಿಹ್ವೆಗೆ ಗುರುಲಿಂಗವಾದಾತ ಬಸವಣ್ಣ. ಎನ್ನ ತ್ವಕ್ಕಿಗೆ ಜಂಗಮಲಿಂಗವಾದಾತ ಬಸವಣ್ಣ. ಎನ್ನ ನೇತ್ರಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ಶ್ರೋತ್ರಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಹೃದಯಕ್ಕೆ ಮಹಲಿಂಗವಾದಾತ ಬಸವಣ್ಣ. ಇಂತಿದನರಿದೆನಾಗಿ ಗವರೇಶ್ವರಲಿಂಗದಲ್ಲಿರ್ದೆನಯ್ಯಾ.