Index   ವಚನ - 4    Search  
 
ಅದೇತಕೆ ಅಯ್ಯಾ, ಶಿವನೊಳಗೆ ಕೂಟಸ್ಥನಾದೆಹೆನೆಂಬ ಹಲುಬಾಟ? ಇದು ನಿತ್ಯ ಸತ್ಯದ ಆಟವಲ್ಲ; ಇನ್ನಾರಿಗೆ ಕೇಳಿ, ಮತ್ತಿನ್ನಾರಿಗೆ ಹೇಳುವೆ ನೀ ಮಾಡುವ ಮಾಟ? ಮುನ್ನ ನೀನಾರೆಂದಿದ್ದೆ ಹೇಳಾ? ಆ ಭಾವವನರಿದು ನಿನ್ನ ನೀನೆ ತಿಳಿ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ.