Index   ವಚನ - 5    Search  
 
ಅನಾಚಾರ ಅಳವಟ್ಟು ಗುರುವನರಿಯಬೇಕು. ಅನಾಮಿಕನಾಗಿ ಲಿಂಗವ ಗ್ರಹಿಸಬೇಕು. ಸರ್ವಪಾತಕ ಪ್ರಸನ್ನನಾಗಿ ಜಂಗಮವ ಭಾವಿಸಬೇಕು. ಇಂತೀ ತ್ರಿವಿಧ ಪಾತಕಂಗಳಲ್ಲಿ ಪವಿತ್ರಂಗಳನರಿದು ಇರವಿನಲ್ಲಿ ಇರವನಿಂಬಿಟ್ಟು ಉರಿ ಎಣ್ಣೆಯ ವೇಧಿಸಿ ಉರಿದು ಯೋಗ ನಿಂದಲ್ಲಿ, ಮಾಡುವ ಕ್ರೀ ಮಾಡಿಸಿಕೊಂಬ ವಸ್ತು ಉಭಯ ನಷ್ಟವಹನ್ನಕ್ಕ ನೀ ಎನ್ನಲ್ಲಿ ನಾ ನಿಮ್ಮಲ್ಲಿ ಎಂಬನ್ನಕ್ಕ ಅದು ಭಿನ್ನಭಾವ. ಈ ಉಭಯದ ಗನ್ನ ಬೇಡ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ, ಎನ್ನಲ್ಲಿ ತಲ್ಲೀಯವಾಗಿರು.