Index   ವಚನ - 6    Search  
 
ಅಯ್ಯಾ, ನಿಮ್ಮಾದ್ಯರ ವಚನವ ಕೇಳಿ ಎನ್ನಂಗದ ಭಂಗ ಹಿಂಗಿತ್ತು ನೋಡಾ. ಅಯ್ಯಾ, ನಿಮ್ಮ ಶರಣರ ಸಂಗದಿಂದ ಮಹಾಲಿಂಗದ ಸಂಯೋಗವಾಯಿತ್ತು ನೋಡಾ. ಅಯ್ಯಾ, ನಿಮ್ಮ ಶರಣರ ಸಂಗದಿಂದ ಮಹಾಪ್ರಸಾದದ ಪರುಷವ ಕಂಡೆ, ಆ ಪರುಷದ ಮೇಲೆ ಮೂರು ಜ್ಯೋತಿಯ ಕಂಡೆ, ಆ ಜ್ಯೋತಿಯ ಬೆಳಗಿನಲ್ಲಿ ಒಂಬತ್ತು ರತ್ನವ ಕಂಡೆ, ಆ ರತ್ನಂಗಳ ಮೇಲೆ ಒಂದು ಅಮೃತದ ಕೊಡನ ಕಂಡೆ. ಕಂಡವನೆ ಉಂಡ, ಉಂಡವನೆ ಉರಿದ, ಉರಿದವನೆ ಕರದ, ಕರದವನೆ ನೆರದ, ನೆರದವನೆ ಕುರುಹನರಿದ, ಅರಿದವನೆ ನಿಮ್ಮನರಿದವ ಕಾಣಾ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ.