Index   ವಚನ - 13    Search  
 
ಊರ್ವಸಿ ಕರ್ಪೂರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರಲ್ಲದೆ, ಹಂದಿ ಕರ್ಪೂರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರೆ, ಹುಡುಹುಡು ಎಂದಟ್ಟುವರಲ್ಲದೆ? ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ ಅನುಭಾವವ ಮಾಡಿದಡೆ ಮಚ್ಚುವರಲ್ಲದೆ, ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಅನುಭಾವವ ಮಾಡಿದಡೆ ಮಚ್ಚುವರೆ? ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂದ ಕರಕಷ್ಟ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ.