Index   ವಚನ - 20    Search  
 
ಕಲ್ಲ ಬಿತ್ತಿ ನೀರನೆರೆದಲ್ಲಿ ಪಲ್ಲವಿಸುವುದೆ ದಿಟದ ಬೀಜದ ವೃಕ್ಷದಂತೆ? ಶ್ರದ್ಧೆ ಸನ್ಮಾರ್ಗ ಭಕ್ತಿ ಇಲ್ಲದಲ್ಲಿ ಗುರುಭಕ್ತಿ, ಶಿವಲಿಂಗಪೂಜೆ, ಚರಸೇವೆ ತ್ರಿವಿಧ ಇತ್ತವೆ ಉಳಿಯಿತ್ತು. ಮತ್ತೆ ನಿಜವಸ್ತುವಿನ ಸುದ್ದಿ ನಿಮಗೆತ್ತಣದೊ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ ವಿಶ್ವಾಸಬೇಕು.