Index   ವಚನ - 24    Search  
 
ಕಾಯವುಳ್ಳನ್ನಕ್ಕ ಲಿಂಗಪೂಜೆ, ಆತ್ಮವುಳ್ಳನ್ನಕ್ಕ ಅರಿವಿನ ಭೇದ. ಪುರುಷ ನೀ, ಸತಿ ನಾನೆಂಬಲ್ಲಿ ಉಭಯದ ಬೀಜ ನಾ ನೀನೆಂಬನ್ನಕ್ಕ. ಅಂಗದ ಲಿಂಗದಲ್ಲಿಯೆ ನಿರಂಗವಾಗಬೇಕು, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ.