Index   ವಚನ - 25    Search  
 
ಕಾಯವೆರಸಿ ಕೈಲಾಸಕ್ಕೆ ಹೋಹೆನೆಂಬರು, ಇದು ಕ್ರಮವಲ್ಲ. ಘನಲಿಂಗ ಕರಸ್ಥಲದೊಳಗಿಪ್ಪ ಅನುವನರಿಯದೆ ಇಲ್ಲಿ ಕರ್ಮ, ಅಲ್ಲಿ ನಿಃಕರ್ಮವೆ? ಹೇಮದ ಮಾಟದ ಒಳಹೊರಗಿನಂತೆ ಮರ್ತ್ಯ ಕೈಲಾಸವೆಂಬ ಕಟ್ಟಳೆಯಿಲ್ಲ. ಆತ್ಮ ನಿಶ್ಚಯವಾದಲ್ಲಿಯೆ ಕೈವಲ್ಯ. ಮತ್ತತ್ವವಾದಲ್ಲಿಯೆ ಮರ್ತ್ಯದೊಳಗು. ಈ ಗುಣ ಸದಮಲಭಕ್ತನ ಯುಕ್ತಿ,ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಿಕ್ಕಿದ ಗೊತ್ತು.