Index   ವಚನ - 28    Search  
 
ಕೂಟಕ್ಕೆ ಕುರುಹಾದುದನರಿಯದೆ, ಆತ್ಮಕ್ಕೆ ಅರಿವಾದುದನರಿಯದೆ, ಕೈಲಾಸವೆಂಬ ಸೂತ್ರದ ಒಳಗಿಗೆ ಮನಸೋತಿರಲ್ಲಾ? ಅಂಧಕನ ಕೈಯ ರತ್ನದಂತೆ ಆದಿರಲ್ಲಾ? ಪಂಗುಳನ ಕರದ ಶಸ್ತ್ರದಂತೆ ಆದಿರಲ್ಲಾ? ಈ ನಿರಂಗವ ತಿಳಿದು ನಿಂದಲ್ಲಿ ಬೇರೆ ಲಿಂಗವಡಗುವದಕ್ಕೆ ಉಭಯವುಂಟೆಂಬ ದಂದುಗ ಬೇಡ. ತಾ ನಿಂದಲ್ಲಿಯೆ ನಿಜಕೂಟ, ತಿಳಿದಲ್ಲಿಯೆ ನಿರಂಗವೆಂಬುದು.ಉಭಯವಿಲ್ಲ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ.