Index   ವಚನ - 29    Search  
 
ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ? ಪರುಷರಸ ಕೈಯಲ್ಲಿದ್ದು ಕೂಲಿಯ ಮಾಡಲೇತಕ್ಕೆ? ಕ್ಷುತ್ತು ನಿವೃತ್ತಿಯಾದವಂಗೆ ಕಟ್ಟೋಗರದ ಹೊರೆಯ ಹೊರಲೇತಕ್ಕೆ? ನಿತ್ಯ ಅನಿತ್ಯವ ತಿಳಿದು, ಮರ್ತ್ಯ ಕೈಲಾಸವೆಂಬುದು ಭಕ್ತರಿಗೆ ಯುಕ್ತಿಯಲ್ಲ. ನಿಶ್ಚಯವ ತಾನರಿತು ಅತ್ತಣ ಇತ್ತಣ ಗೊತ್ತು ನಿಶ್ಚಯವಾಗಿ ನಿಂದಲ್ಲಿ, ಆ ಬಚ್ಚಬಯಲ ಬೆಳಗ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನನಲ್ಲಿ.