Index   ವಚನ - 35    Search  
 
ತನ್ನ ಕಣ್ಣಿಂದ ಕನ್ನಡಿಯ ನೋಡಿ, ಆ ದೃಷ್ಟಿ ಕಾಣಲಿಕ್ಕೆ ಕಣ್ಣೊ? ಕನ್ನಡಿಯೊ? ಆ ಉಭಯದ ದೃಷ್ಟಿಯಿಂದ ಇಷ್ಟದ ದೃಷ್ಟವ ಕಂಡು, ಉಭಯ ನಿಶ್ಚಯವಾದಲ್ಲಿ ಕೈವಲ್ಯವೆಂಬ ಕರ್ಕಶ ಬೇಡ. ಕೈಯ ಮುದ್ದೆಯ ಕೆಡಹಿದಲ್ಲಿ ಬಾಯಿಗೆ ಬಯಲು, ಅದ ನಿಮ್ಮ ನೀವೇ ತಿಳಿದುಕೊಳ್ಳಿ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ.