Index   ವಚನ - 43    Search  
 
ನೀರು ನೆಲನಿಲ್ಲದೆ ಇರಬಹುದೆ? ಬೀಜ ನೆಲೆಯಿಲ್ಲದೆ ಹುಟ್ಟಬಹುದೆ? ಜ್ಞಾನ ಕ್ರಿಯೆಯಿಲ್ಲದೆ ಅರಿಯಬಹುದೆ? ಚಿತ್ತ ಚಿತ್ತುವಿಲ್ಲದೆ ವಸ್ತುವ ಲಕ್ಷಿಸಿ ಗ್ರಹಿಸಬಲ್ಲುದೆ? ಇಂತೀ ಕ್ರೀ ಜ್ಞಾನ ಸಂಬಂಧಸ್ಥಲಭಾವ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಉಭಯಸ್ಥಲಭೇದ.