Index   ವಚನ - 48    Search  
 
ಬಯಲ ಹೊಲಬಿನಲ್ಲಿ ಹುಟ್ಟಿದ ಬೆಳಗು ಶಿಲೆ ಲೋಹ ಕಂಚುಗಳಲ್ಲಿ ಬೆಳಗಿನ ಕಳೆ ತೋರುವಂತೆ, ಎನ್ನ ಕರತಳದಲ್ಲಿ ಸ್ವಯಂಭುವಪ್ಪ ಲಿಂಗವೆ, ನಿನ್ನ ಕಳೆ ಎನ್ನ ಕಂಗಳಿಗೆ ಹೊಲಬಾಗಿ ಏಕೆ ತೋರದು? ಅದು ಎನ್ನದು ಜಡವೊ ನಿನ್ನಯ ಪ್ರಕೃತಿಯೊ? ಅದು ನಿನ್ನ ಬಿನ್ನಾಣದ ಗನ್ನದ ಭೇದವೊ? ಎನ್ನಲ್ಲಿ ನೀನಿಲ್ಲದ ಕಾರಣವೊ? ನಾ ನಿನ್ನಲ್ಲಿ ಸುಗುಣವಿಲ್ಲದ ಕಾರಣವೊ ಎನಗೆ ಭಿನ್ನನಾದೆ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನಾ, ಎನ್ನಲ್ಲಿ ನೀ ಸನ್ನದ್ಧನಾಗಿರು.