Index   ವಚನ - 52    Search  
 
ಬೀಜದೊಳಗಣ ವೃಕ್ಷದ ಹಣ್ಣ ಅದನಾರು ಮೆಲಬಹುದು? ಸಸಿಯೊಳಗಣ ಲತೆ ಪರ್ಣ ತಲೆದೋರದ ನಸುಗಂಪಿನ ಕುಸುಮವ ಅದಾರು ಮುಡಿವರು? ಇಂತೀ ಅರಿವಿನ ಅರಿವ ಕುರುಹಿಟ್ಟು ಕೂಡುವನೆ ಲಿಂಗಾಂಗಿ? ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಇದು ಸ್ವಾನುಭಾವಿಯ ಸನ್ನದ್ಧಸ್ಥಲ.