Index   ವಚನ - 57    Search  
 
ಮಾಡಿದ ಭಕ್ತಿಗೆ ಕೈಲಾಸಕ್ಕೆ ಹೋದೆಹೆನೆಂಬುದು ಕೈಕೂಲಿ. ಭಾಷೆಗೆ ತಪ್ಪಿ ಓಸರಿಸಿದ ಮತ್ತೆ ಅನಿಹಿತವ ಹೇಳಿದಲ್ಲಿ ಮತ್ತೆ ಘಾತಕತನದಿಂದ ಎಯ್ದಿಹೆನೆಂಬುದು ಭಕ್ತಿಗೆ ವಿಹಿತವಲ್ಲ. ದೃಷ್ಟದಲ್ಲಿ ಕೊಟ್ಟುದ ಲಕ್ಷಿಸಲರಿಯದೆ, ಅಲಕ್ಷ್ಯವ ಲಕ್ಷಿಸಿ ಕಾಂಬುದಕ್ಕೆ ಲಕ್ಷ್ಯವೇನು? ಅದು ನಿರೀಕ್ಷಣೆಯ ಲಕ್ಷ್ಯದಿಂದಲ್ಲದೆ, ಆತ್ಮಂಗೆ ಲಕ್ಷ್ಯವಿಲ್ಲ. ಇಂತೀ ಉಭಯದಲ್ಲಿ ಲಕ್ಷಿತವಾದವಂಗೆ ಮರ್ತ್ಯ ಕೈಲಾಸವೆಂಬುದು; ತನ್ನರಿವು ನಿಶ್ಚಯವಾದಲ್ಲಿ ಅದೆ ಲಕ್ಷ್ಯ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕ ಮಲ್ಲಿಕಾರ್ಜುನ ಅಲ್ಲಿ ಇಲ್ಲಿ ಎಲ್ಲಿಯೂ ತಾನೆ.