Index   ವಚನ - 3    Search  
 
ಅಂಗದ ಮೇಲೆ ಶಿವಲಿಂಗ ನೆಲಸುವಂಗೆ ಮೂರುಸ್ಥಲವಾಗಬೇಕು. ಅವಾವವಯ್ಯಾಯೆಂದಡೆ: ಗುರುಲಿಂಗಜಂಗಮದಲ್ಲಿ ಭಕ್ತಿ. ಅರಿವ ಸಾಧಿಸುವಲ್ಲಿ ಜ್ಞಾನ. ಕರಣಾದಿಗಳ ಭಂಗ ವೈರಾಗ್ಯ. ಇನಿತಿಲ್ಲದೆ ಲಿಂಗವ ಪೂಜಿಸಿಹೆನೆಂಬ, ಲಿಂಗವ ಧರಿಸಿಹೆನೆಂಬ ಲಜ್ಜೆಭಂಡರ ಕಂಡು, ನಾ ನಾಚಿದೆನಯ್ಯಾ. ಇದು ಕಾರಣ ಗದ್ದುಗೆಗೆಟ್ಟು ಎದ್ದಾತನು ಲಿಂಗವಲ್ಲ ಕಾಣಾ. ಲಿಂಗ ಸತ್ತ, ನಾ ಕೆಟ್ಟೆ, ರಂಡೆಗೂಳೆನಿಸಲಾರೆ. ಎನ್ನ ಹತ್ಯವ ಮಾಡಾ, ನಿಃಕಳಂಕ ಮಲ್ಲಿಕಾರ್ಜುನಾ.