Index   ವಚನ - 68    Search  
 
ಅಸಿ ಮಸಿ ಕೃಷಿ ವಾಣಿಜ್ಯ ಗೋಪಾಲ ಯಾಚನ ಷಟ್‍ಕೃಷಿವ್ಯಾಪಾರವ ಮಾಡುವಾತ ಜಂಗಮವಲ್ಲ. ಆ ಜಂಗಮದ ಪಾದೋದಕ ಪ್ರಸಾದವ ಕೊಂಬ ಪಂಚಮಹಾಪಾತಕರ ಅಂಗಳವ ಮೆಟ್ಟಿದಡೆ, ಸಂಗದಲ್ಲಿ ನುಡಿದಂತೆ, ಕುಂಭಿನಿಪಾತಕ. ಅವರನು ಹಿಂಗದಿರ್ದಡೆ ಲಿಂಗವಿಲ್ಲ, ಜಂಗಮವಿಲ್ಲ ಪಂಚಾಚಾರಕ್ಕೆ ಹೊರಗು. ಮಾಟಕೂಟದವರೆಲ್ಲ ಜಗದಾಟದ ಡೊಂಬರೆಂಬೆ. ಈಶನಾಣೆ ತಪ್ಪದು, ನಿಃಕಳಂಕ ಮಲ್ಲಿಕಾರ್ಜುನಾ.