Index   ವಚನ - 142    Search  
 
ಉರಿ ಆತ್ಮಸ್ಥಾವರಂಗಳಲ್ಲಿ ನಂದದಿಹನ್ನಕ್ಕ, ನೀರು ಒಂದರಲ್ಲಿಯೆ ಇಂಗದಿಹನ್ನಕ್ಕ, ಬೆಳಗು ಒಂದರಲ್ಲಿ ಸಂದಳಿದಿಹನ್ನಕ್ಕ, ಲಿಂಗವೆಂಬುದೊಂದು ಪ್ರಮಾಣವುಂಟು ಆ ಪ್ರಮಾಣು ಅಪ್ರಮಾಣಹನ್ನಕ್ಕ, ಭಾವ ಮೂರು, ನಿರ್ಭಾವ ಮೂರು, ಸ್ಥೂಲವಾರು, ತತ್ತ್ವವೈದು, ಇಂತಿವು ಕೂಡೆ, ಅಳೆದು ಮರಳಲಿಕ್ಕೆ ಹಲವು ಸ್ಥಲ ಕುಳ ಬೇರಾಯಿತ್ತು. ಬಂಗಾರವೊಂದು ಹಲವು ತೊಡಿಗೆಯ ಹೊಲಬಾದಂತೆ, ತನ್ನಷ್ಟೇ ತದ್ದೃಷ್ಟವುಭಯವ ಕೂಡುವನ್ನಬರ, ನಿಃಕಳಂಕ ಮಲ್ಲಿಕಾರ್ಜುನನೆಂದೆನುತ್ತಿರಬೇಕು.