Index   ವಚನ - 335    Search  
 
ಚಂದ್ರಕಾಂತಶಿಲೆಯನೊಂದು ಹಿಳಿದಲ್ಲಿ, ಬಿಂದು ಬಂದುದುಂಟೆ ? ಸುಗಂಧದ ನನೆಯ ತಂದು ಬಂಧಿಸಿದಲ್ಲಿ, ಆ ಸುವಾಸನೆ ಬಂದುದುಂಟೆ ? ಆ ಕಿರಣ ಪರುಷಶಿಲೆ ಸತಿಯಾಗಿ ಬೆರಸಿದಲ್ಲಿ, ಬಿಂದುರೂಪಾಯಿತ್ತು. ರಿತುಕಾಲಕ್ಕೆ ಕುಸುಮ ಬಲಿಯಲಾಗಿ, ಸುವಾಸನೆಯೆಸಗಿತ್ತು. ಇಂತೀ ಉಭಯದಿಂದ ಅರಿವಲ್ಲಿ, ಸ್ಥಲಸ್ಥಲವ ನೆಮ್ಮಿ ನಿಃಸ್ಥಲವನರಿತಲ್ಲಿ, ದೃಷ್ಟದ ಇಷ್ಟ ಅಲ್ಲಿಯೇ ಲೇಪ, ನಿಃಕಳಂಕ ಮಲ್ಲಿಕಾರ್ಜುನಾ.