Index   ವಚನ - 367    Search  
 
ಜ್ಯೋತಿಯ ಬೆಳಗಿನಲ್ಲಿ ನೋಡಿ ಜ್ಯೋತಿಯ ಪಟವ ಕಾಬಂತೆ, ಕಣ್ಣಿನಿಂದ ಕನ್ನಡಿಯ ನೋಡಿ ಕಣ್ಣ ಕಲೆಯ ಕಾಬಂತೆ, ತನ್ನಿಂದ ತಾ ನೋಡಿ ತನ್ನನರಿಯಬೇಕು. ತನ್ನನರಿಯದವ ನಿಮ್ಮನೆತ್ತಬಲ್ಲನೋ ? ತನ್ನನರಿವುದಕ್ಕೆ ದೃಷ್ಟವ ಕೈಯಲ್ಲಿ ಕೊಟ್ಟು ಕಾಣದುದಕ್ಕೆ ಚಿತ್ತವ ನೆನಹಿಂಗಿತ್ತ. ಚಿತ್ತ ಇಷ್ಟದಲ್ಲಿ ಅಚ್ಚೊತ್ತಿದ ಮತ್ತೆ ದೃಷ್ಟವ ಕಾಬುದಿನ್ನೇನೋ ? ಉರಿಯೊಳಗಣ ಕರ್ಪುರ, ಅನಿಲನೊಳಗಣ ಪಾವಕ, ಶಿಲೆಯುಂಡ ಎಣ್ಣೆ ಅಳತೆಗೆ ಉಂಟೇ ಅಯ್ಯಾ. ಲಿಂಗವ ಮೆಚ್ಚಿದ ಅಂಗಕ್ಕೆ ಜಗದ ಹಂಗಿಲ್ಲ. ಅನಂಗ, ಅತೀತ ನಿಃಕಳಂಕ ಮಲ್ಲಿಕಾರ್ಜುನಲಿಂಗವೇ ತಾನಾದ ಶರಣಂಗೆ.