Index   ವಚನ - 400    Search  
 
ತೃಣವತಿಶುಷ್ಕವಾದ ಪರ್ಣ ತರುವ ಹಿಡಿದ ಅನಲನ ನಡುವೆ ಎಡಗೈಯ ಬಲ್ಲದೆ ? ನಿರ್ಮಲ ಸುಚಿತ್ತನ ಪರಮವಿರಕ್ತನ ಭಾವ, ವಸ್ತುವ ಮುಟ್ಟಿದಲ್ಲಿ, ತ್ರಿವಿಧಮಲಕ್ಕೆ ಸಿಕ್ಕುವನೆ ? ಅವು ತನ್ನೊಳಗಿರ್ದಡೂ ತಾನವರೊಳಗಿರ್ದಡೂ ಗಾಜಿನ ಕುಪ್ಪಿಗೆಯ ನೀರೆಣ್ಣೆಯಂತೆ, ಸ್ಫಟಿಕದ ಮಧ್ಯದಲ್ಲಿ ಬಹುವರ್ಣವಾದ ಹೊರೆಯ ತೋರಿ ಹಿಡಿವವನಂತೆ, ಅದು ಸ್ವಯವಲ್ಲ, ಇದು ಸ್ವಯವಲ್ಲದಿಪ್ಪ ಬಾಹ್ಯಕ್ರಿಯಾವರ್ತಕನ ಲಕ್ಷಣದ ಭಿತ್ತಿಯ ತೆರ ನಿಃಕಳಂಕ ಮಲ್ಲಿಕಾರ್ಜುನನ ಒಡಗೂಡಿದ ಪರಮವಿರಕ್ತನ ಭೇದ.