Index   ವಚನ - 401    Search  
 
ತೊಗಲ ಕೈಯಲ್ಲಿ ಶಿಲೆಯ ಲಿಂಗವ ಹಿಡಿದು, ಮಣ್ಣ ಪರಿಯಾಣದಲ್ಲಿ ಓಗರವನಿಕ್ಕಿ, ಲಿಂಗನೈವೇದ್ಯವ ತೋರಿದಡೆ, ಓಗರ ಸವೆದುದಿಲ್ಲ, ನೈವೇದ್ಯದ ರುಚಿಯನರಿದುದಿಲ್ಲ. ಒಳಗು ಶುದ್ಧವಿಲ್ಲದೆ ಮುಟ್ಟಿ ಅರ್ಪಿತವೆಂದಡೆ, ಮೆಚ್ಚುವರೆ ಪ್ರಾಣಲಿಂಗಿಸಂಬಂಧಿಗಳು. ಉಂಡವನು ಉಂಡಂತೆ ತೇಗುವ ಸಂದಳಿದು, ದ್ವಂದ್ವ ಹಿಂಗಿ ನಿಜವಾರೆಂಬುದ ವಿಚಾರಿಸಿ ಕೊಡುವುದಕ್ಕೆ ಮೊದಲೆ, ಕೊಂಡವರಾರು ಎಂಬುದ ಭಾವಿಸುವುದಕ್ಕೆ ಮೊದಲೆ, ಭಾವನೆಗೆ ಬಂದವರಾರೆಂದು ವಿಚಾರಿಸಿ, ಬೀಜ ನೆರೆ ಬಲಿದು ಪುನರಪಿ ಬಪ್ಪಂತೆ ಲಿಂಗ ತಾನಾಗಿ, ಸಂದೇಹವಿಲ್ಲದೆ ಸೋಂಕುವುದಕ್ಕೆ ಮುನ್ನವೆ ಅರ್ಪಿತ ನಿಂದಾಯಿತ್ತಾಗಿ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಪ್ರಾಣಲಿಂಗ ಸಮರ್ಪಣ.