Index   ವಚನ - 472    Search  
 
ಪಟ ಬಾಲಸರವು ಕೂಡಿರ್ದಡೇನು ? ಸೂತ್ರ ಕಿಂಚಿತ್ತು ತಪ್ಪಿದಡೆ ಖೇಚರತ್ವದಲ್ಲಿ ಆಡಲರಿಯದಂತೆ, ಹೊರಗಣ ಮಾತಿನಿಂ ಗುರುವೆಂದು ಶರಣೆಂದಡೇನಾಯಿತ್ತು ? ಕೈಯಲ್ಲಿ ಲಿಂಗವ ಹಿಡಿದುಕೊಂಡು, ಕಣ್ಣಿನಲ್ಲಿ ನೋಡಿ, ಮನಮುಟ್ಟದಿರ್ದಡೇನಾಯಿತ್ತು? ಖ್ಯಾತಿ ಲಾಭಕ್ಕೆ ಜಂಗಮಕ್ಕೆ ಧನವ ಕೊಟ್ಟಡೇನಾಯಿತ್ತ? ಇದು, ಉಸಿರ ಹಿಡಿದಡೆ, ದ್ವಾರಂಗಳೆಲ್ಲವೂ ಮುಚ್ಚುವ ತೆರನಂತೆ, ಮಹಾಘನವನರಿದಲ್ಲಿಯೆ ತ್ರಿವಿಧವೂ ಸಮರ್ಪಣ. ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಸ್ಥಲನಿರ್ದೇಶ.