Index   ವಚನ - 578    Search  
 
ಭಕ್ತಿಯುಳ್ಳನ್ನಕ್ಕ ಇಷ್ಟಲಿಂಗದ ಹಂಗು ಬೇಕು. ಆತ್ಮನುಳ್ಳನ್ನಕ್ಕ ಅರಿವೆಂಬುದ ವಿಚಾರಿಸಬೇಕು. ಮರ್ತ್ಯವೆಂಬುದು ನಾ ಬಲ್ಲನ್ನಕ್ಕ ಕರ್ಕಶದ ಜಗ. ಇದು ಕಾರಣದಲ್ಲಿ, ಕೈಲಾಸವೆಂಬ ಬಟ್ಟೆಯನರಸಬೇಕು. ಎನ್ನ ಸತ್ಯಕ್ಕೆ, ಎನ್ನ ಭಕ್ತಿಗೆ, ಎನ್ನ ಮನಕ್ಕೆ ಎನ್ನ ಮುಕ್ತ್ಯಂಗನೆ, ಎನ್ನ ನಿಶ್ಚಯಕ್ಕೆ ಒಂದು ಗೊತ್ತು ತೋರಾ. ನಿಃಕಳಂಕ ಮಲ್ಲಿಕಾರ್ಜುನ ಎಲ್ಲಿ ಇದ್ದಹನು ಹೇಳಾ ?