Index   ವಚನ - 694    Search  
 
ವಸ್ತುವ ಮುಟ್ಟಿ ಇಹಪರದಲ್ಲಿ ಸುಖಿಯಾದೆನೆಂಬನ್ನಬರ, ಅದು ತನ್ನ ನೆಲೆಯೋ ? ಆತ್ಮನ ಭೇದವೋ ? ಎಂಬುದ ತಾನರಿತಲ್ಲಿ, ಇಷ್ಟಲಿಂಗಕ್ಕೆ ದೃಷ್ಟವ ಕೊಟ್ಟು, ಆತ್ಮಲಿಂಗಕ್ಕೆ ತೃಪ್ತಿಯ ಕೊಟ್ಟು, ನಿಶ್ಚಯಿಸಿಕೊಂಡೆಹೆನೆಂಬುದು ಅದೇನು ಹೇಳಾ. ಉಭಯಭಿನ್ನವುಳ್ಳನ್ನಕ್ಕ ಪ್ರಾಣಲಿಂಗಿಯಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.