ಹೆಣದ ಚಪ್ಪರದ ಮಣಿಮಾಡದ ಮೇಲೆ, ಸುತ್ತಿದವಾರು ಸೀರೆ.
ಹೆಣಕ್ಕೆ ಹೊದ್ದಿಸಿದವು ಮೂರು ಸೀರೆ.
ಮಣಿಮಾಡದ ಕಂಬಕ್ಕೆ ಸುತ್ತಿದವೆಂಟು, ನಾನಾ ಚಿತ್ರದ ಬಣ್ಣದ ಸೀರೆ.
ಒಪ್ಪಿತ್ತು ತುದಿಯಲ್ಲಿ ಹೊಂಗಳಸ.
ಆ ಹೊಂಗಸಳದ ತುದಿಯ ಕೊನೆಯ ಮೊನೆಯ ಮೇಲೆ
ಬಿಳಿಯ ಗಿಳಿ ಬಂದು ಕುಳಿತಿತ್ತು.
ಕಳಶ ಮುರಿಯಿತ್ತು, ಕಂಬ ಮಾಡದ ಹಂಗ ಬಿಟ್ಟಿತ್ತು.
ಕಂಬದ ಸೀರೆ ಒಂದೂ ಇಲ್ಲ.
ಮಾಡಕ್ಕೆ ಹಾಕಿದ ಮಂಚದ ಕೀಲು ಬಿಟ್ಟವು.
ಮಾಡದ ಹೆಣ ಸಂಚರಿಸಿಕೊಂಡು ಮುಂಚಿತ್ತು.
ಹೆಣದಾತ್ಮ ಗಿಳಿಯ ಕೊಕ್ಕಿನ ತುದಿಗಂಗವಾಗಿ,
ಇದು ಅಗಣಿತವಾಯಿತ್ತು, ನಿಃಕಳಂಕ ಮಲ್ಲಿಕಾರ್ಜುನಾ.